ಮನೆ ಸುದ್ದಿ ಜಾಲ ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಗಳಿಗೆ ನಿರ್ಬಂಧ

ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಗಳಿಗೆ ನಿರ್ಬಂಧ

0

ಮೈಸೂರು (Mysuru)-ಮೈಸೂರು ಮಹಾನಗರ ಪಾಲಿಕೆಯ ಎಲ್ಲಾ 65 ವಾರ್ಡ್ ಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಗಳಿಗೆ ನಿರ್ಬಂಧ ವಿಧಿಸಿ ಮೈಸೂರು ನಗರಪಾಲಿಕೆ ಆದೇಶ ಹೊರಡಿಸಿದೆ.
ಸಾರ್ವಜನಿಕ ಸ್ಥಳಗಳು, ತೆರೆದ ಪ್ರದೇಶಗಳು ಹಾಗೂ ಇನ್ನಿತರೆ ಸ್ಥಳಗಳಲ್ಲಿ ಜಾಹೀರಾತಿಗಾಗಿ ಪ್ಲೆಕ್ಸ್, ಪೋಸ್ಟರ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಯಥೇಚ್ಚವಾಗಿ ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಪ್ರದೇಶಗಳ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ.
ಈ ಹಿನ್ನಲೆಯಲ್ಲಿ ಘನ ತ್ಯಾಜ್ಯದಲ್ಲಿನ ಪ್ರಮಾಣ ಹೆಚ್ಚಾಗುತ್ತಿದ್ದು, ಅಲ್ಲದೆ ರಸ್ತೆ ಬದಿಗಳಲ್ಲಿ ತ್ಯಾಜ್ಯವು ನಗರದ ಸ್ವಚ್ಚತೆಯ ಮೇಲೆ ಪರಿಣಾಮ ಉಂಟಾಗುತ್ತಿರುತ್ತದೆ ಮತ್ತು ಅಪಘಾತಗಳಿಗೂ ಕಾರಣವಾಗಬಹುದು.
ಆದ್ದರಿಂದ ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪ್ಲೆಕ್ಸ್, ಪೋಸ್ಟರ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಅಳವಡಿಸಿರುವವರ ವಿರುದ್ದ ಕರ್ನಾಟಕ ತರೆದ ಸ್ಥಳಗಳು(ವಿರೂಪಗೊಳಿಸುವಿಕೆಯ ತಡೆಗಟ್ಟುವಿಕೆ) ಕಾಯಿದೆ,1981 ರನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.