ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಚಾಂಡ್ಲಿ ಗ್ರಾಮದಲ್ಲಿ ಮಾರ್ಟರ್ ಶೆಲ್ ಸ್ಫೋಟಗೊಂಡ ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವನಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂಬಾ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಚಾಂಡ್ಲಿ ಗ್ರಾಮದಲ್ಲಿ ಮಾರ್ಟರ್ ಶೆಲ್ ಸ್ಫೋಟಗೊಂಡ ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವನಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಮಾರ್ಟರ್ ಶೆಲ್ ಸ್ಫೋಟಗೊಂಡಿದೆ. ಘಟನೆಯಲ್ಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ವ್ಯಕ್ತಿಗೆ ಗಂಭೀರವಾದ ಗಾಯವಾಗಿದೆ ಎಂದು ಸಾಂಬಾ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮಾಹಿತಿ ನೀಡಿದ್ದಾರೆ.
“ಚಂದಲಿ ಗ್ರಾಮದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಮೋರ್ಟರ್ ಶೆಲ್ ಸ್ಫೋಟಗೊಂಡಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಇದೀಗ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.