ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಲಾಜಿಸ್ಟಿಕ್ಸ್ ಆರಂಭಿಸಿದೆ. ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು 20 ‘ನಮ್ಮ ಕಾರ್ಗೋ’ ಟ್ರಕ್‌ಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿ, ‘ಕೆಎಸ್‌ಆರ್‌ಟಿಸಿ ಒಂದು ವರ್ಷದೊಳಗೆ 500 ಟ್ರಕ್‌ಗಳಿಗೆ ತನ್ನ ಕಾರ್ಗೋ ಫ್ಲೀಟ್ ಅನ್ನು ವಿಸ್ತರಿಸಲು ಯೋಜಿಸಿದೆ. ಮುಂದಿನ ಕೆಲವು ದಿನಗಳಲ್ಲಿ 100 ಟ್ರಕ್‌ಗಳು ಸೇರ್ಪಡೆಗೊಳ್ಳಲಿವೆ ಎಂದು ಹೇಳಿದರು.
ಇನ್ನು ಈ ಹೊಸ ಟ್ರಕ್‌ಗಳನ್ನು ಟಾಟಾದ ಪುಣೆ ತಯಾರಿಕ ಘಟಕದಲ್ಲಿ ತಯಾರಿಸಲಾಗಿದ್ದು, ಇದನ್ನು ರಾಜ್ಯದೊಳಗೆ ಸರಕು ಸಾಗಿಸಲು ಬಳಸಲಾಗುತ್ತದೆ. ಈಗ 20 ಟ್ರಕ್‌ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರ ಪ್ರತಿಕ್ರಿಯೆಯನ್ನು ನೋಡಿದ ನಂತರ ಒಂದು ತಿಂಗಳಲ್ಲಿ 100 ಮತ್ತು ಒಂದು ವರ್ಷದಲ್ಲಿ 500 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದರು.
ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣವು ಸರಕು ಸಾಗಣೆ ಟ್ರಕ್‌ಗಳ ಡಿಪೋ ಆಗಿದ್ದು, ಅಲ್ಲಿಂದ ಅವುಗಳ ಕಾರ್ಯಾಚರಣೆ ನಡೆಯಲಿದೆ. ಕೆಎಸ್‌ಆರ್‌ಟಿಸಿ ತನ್ನ ಸರಕು ವ್ಯಾಪಾರವನ್ನು 2021 ರಲ್ಲಿಯೇ ಸರಕುಗಳನ್ನು ಸಾಗಿಸಲು ಬಸ್‌ಗಳನ್ನು ಬಳಸಿ ಪ್ರಾರಂಭಿಸಿತು. ಇದೀಗ ಸಾರಿಗೆ ಸಂಸ್ಥೆ ಹೆಚ್ಚು ಭಾರವಾದ ಸರಕುಗಳನ್ನು ಸಾಗಿಸಲು ಟ್ರಕ್‌ಗಳನ್ನು ಬಳಸಲು ಪ್ರಾರಂಭಿಸಿದ. ಈ ಆರು ಚಕ್ರಗಳ ಟ್ರಕ್ನಲ್ಲಿ 6 ಟನ್ ಸರಕುಗಳನ್ನು ಸಾಗಿಸಬಹುದಾಗಿದೆ.
ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರಕಾರ, ಈ ಟ್ರಕ್‌ಗಳು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕಾರ್ಯನಿರ್ವಹಿಸುತ್ತದೆ. ಈ ಕುರಿತು ಉತ್ತಮ ಪ್ರತಿಕ್ರಿಯೆ ಬಂದಲ್ಲಿ, ಹೆಚ್ಚಿನ ಟ್ರಕ್‌ಗಳನ್ನು ಕೊಂಡುಕೊಂಡು ಇನ್ನಷ್ಟು ಜಿಲ್ಲೆಗಳಿಂದ ಸಂಚರಿಸಲಿದೆ. ಆರಂಭದಲ್ಲಿ, ಸಾರಿಗೆ ಇಲಾಖೆಯು ಔಷಧೀಯ, ಜವಳಿ, ಆಹಾರ ಮತ್ತು ಆತಿಥ್ಯ ಉದ್ಯಮಗಳಿಂದ ಸರಕುಗಳನ್ನು ಸಾಗಿಸಲು ಯೋಜಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.