ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಮೇಲ್ಮನೆ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಲಾಗಿದೆ. ಇದೇ ವೇಳೆ ಅವರನ್ನು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕನಾಗಿ ಅರವಿಂದ್ ಬೆಲ್ಲದ್ ಅವರನ್ನು ನೇಮಕ ಮಾಡಲಾಗಿದೆ.
ಕೆಲವು ದಿನಗಳ ಹಿಂದಷ್ಟೇ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರು, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು ಮತ್ತು ಕೆಲವು ಮೋರ್ಚಾಗಳಿಗೆ ನೇಮಕಾತಿಯನ್ನು ಪ್ರಕಟಿಸಿದ್ದರು. ಇದೀಗ ಎರಡನೇ ಹಂತದಲ್ಲಿ ವಿಧಾನ ಸಭೆ ಮತ್ತು ಪರಿಷತ್ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.
ಕೋಟ ಶ್ರೀನಿವಾಸ ಪೂಜಾರಿ: ಮೇಲ್ಮನೆ ವಿಪಕ್ಷ ನಾಯಕ, ಸುನೀಲ್ ವಲ್ಯಾಪುರೆ : ಪರಿಷತ್ ಉಪ ನಾಯಕ, ಅರವಿಂದ್ ಬೆಲ್ಲದ್: ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕ, ಎನ್. ರವಿಕುಮಾರ್ ಕುಮಾರ್ : ವಿಧಾನ ಪರಿಷತ್ ಮುಖ್ಯ ಸಚೇತಕ, ದೊಡ್ಡನಗೌಡ ಪಾಟೀಲ್: ವಿಧಾನಸಭೆ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
ಆರ್. ಅಶೋಕ್ ಅವರನ್ನು ವಿಧಾನಭೆಯ ವಿಪಕ್ಷ ನಾಯಕರಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡಬೇಕು ಎಂಬ ಬೇಡಿಕೆ ಇತ್ತು. ಆದರೆ, ಕಳೆದ ಬಾರಿ ವಿಧಾನ ಪರಿಷತ್ ವಿಪಕ್ಷ ಸ್ಥಾನವನ್ನು ಚೆನ್ನಾಗಿ ನಿಭಾಯಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರಿಗೇ ಪಕ್ಷ ಮಣೆ ಹಾಕಿದೆ. ಉತ್ತರ ಕರ್ನಾಟಕ ಭಾಗದಿಂದ ವಿಪಕ್ಷ ಸ್ಥಾನಕ್ಕೆ ಕೇಳಿ ಬಂದಿದ್ದ ರಘುನಾಥ್ ಮಲ್ಕಾಪುರೆ ಅವರಿಗೆ ಉಪ ನಾಯಕನ ಸ್ಥಾನ ನೀಡಲಾಗಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.