ಬೆಂಗಳೂರು: ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಡಿಸೆಂಬರ್ 27ರಂದು ನೆನ್ನೆ ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳಿಗೆ ಆಗ್ರಹಿಸಿ ನಡೆಸಲಾದ ಚಳವಳಿಗೆ ಸಂಬಂಧಿಸಿ ಬಂಧಿತರಾದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನರನ್ನು ದೇವನಹಳ್ಳಿಯಲ್ಲಿ ನ್ಯಾಯಾಧೀಶರ ಮುಂದೆ ಇಂದು ಬೆಳಗ್ಗೆ ಹಾಜರುಪಡಿಸಲಾಗಿತ್ತು. ನಾರಾಯಣಗೌಡರು ಸೇರಿದಂತೆ ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು ಎಲ್ಲಾ ಬಂಧಿತರನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಬಂಧನದ ಬೆನ್ನಲ್ಲೇ ಎಲ್ಲಾ ಸಚಿವರ ನಿವಾಸ ಮುಂದೆ ಪ್ರತಿಭಟನೆ ನಡೆಸುವಂತೆ ನಾರಾಯಣಗೌಡರು ಕರೆ ಕೊಟ್ಟಿದ್ದಾರೆ. ಬೆಳಗ್ಗೆಯಿಂದ ಊಟ ನೀಡಿಲ್ಲ, ಔಷಧಿಯನ್ನು ನೀಡಿಲ್ಲ. ನನ್ನ ಮೊಬೈಲ್ ಕಸಿದು ನೋವುಂಟು ಮಾಡಿದ್ದಾರೆ. ನಮ್ಮ ಮೇಲೆ ದಬ್ಬಾಳಿಕೆ ಮಾಡಿ ಕಾರ್ಯಕರ್ತರನ್ನ ಬಂಧನ ಮಾಡಿದ್ದಾರೆ ಎಂದು ನಾರಾಯಣಗೌಡರು ಆರೋಪಿಸಿದರು. ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಜೈಲಿಗೆ ಹಾಕಲು ಕರೆದುಕೊಂಡು ಹೋಗುವ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ನಾರಾಯಣ ಗೌಡರು ಇದೊಂದು ಮುಠ್ಠಾಳ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರವೇ ನಾರಾಯಣ ಗೌಡ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ. ಹೆದ್ದಾರಿ ತಡೆ, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಐಪಿಸಿ 353 ರಡಿ ಪ್ರಕರಣವನ್ನು ನಾರಾಯಣ ಗೌಡ ಸೇರಿ ಸಂಘಟನೆಯ ಇನ್ನಿತರ ಕಾರ್ಯಕರ್ತರ ಮೇಲೆ ದಾಖಲು ಮಾಡಿಕೊಳ್ಳಲಾಗಿದೆ. ನಾರಾಯಣ ಗೌಡರ ಜತೆ 29 ಮಂದಿಯನ್ನು ಜೈಲಿಗೆ ಹಾಕಲಾಗಿದೆ.
ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಆರೋಪ ದಾಖಲಾಗಿದೆ. ನಾರಾಯಣ ಗೌಡ ಸೇರಿ 6 ಮಂದಿ ವಿರುದ್ದ ಪಿಎಸ್ ಐ ಲಿತೀನ್ ದೂರಿನನ್ವಯ ಚಿಕ್ಕಜಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.