ಮನೆ ಕಾನೂನು ಕೋವಿಡ್ ಹರಡುತ್ತಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ

ಕೋವಿಡ್ ಹರಡುತ್ತಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ

0

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್  ನಿರಾಕರಿಸಿದೆ. ವಕೀಲ ಎನ್​ಪಿ ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆವಿ ಅರವಿಂದ ಅವರಿದ್ದ ಪೀಠ, ನಿರ್ಬಂಧ ಹೇರಲು ನಿರಾಕರಿಸಿದೆ.

ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ವರ್ಷಾಚರಣೆಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಅಮೃತೇಶ್ ಮನವಿ ಮಾಡಿದ್ದರು. ಇದನ್ನು ತಿರಸ್ಕರಿಸಿದ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಕೋವಿಡ್​ಗೆ ಸದ್ಯಕ್ಕೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ ಎಂದು ಹೇಳಿತು. ಅಲ್ಲದೆ, ಕೋವಿಡ್ ನಿರ್ಬಂಧ ಕುರಿತ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿತು.

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಹೊಸ ವರ್ಷದ ಪಾರ್ಟಿ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ಮಧ್ಯೆ ಹೊಸ ವರ್ಷ ಆಚರಣೆ ವೇಳೆ ಡ್ರಗ್ಸ್ ಮಾಫಿಯಾ ಸೇರಿದಂತೆ ಇತರ ಮಾದಕ ವಸ್ತು ಸಾಗಾಟ, ಪೂರೈಕೆ ವಿರುದ್ಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೊಸ ವರ್ಷ ಆಚರಣೆ ಸಂದರ್ಭ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರನ್ನು ನೆಲಮಂಗಲ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಅಪರಾಧ ಪೊಲೀಸರು ಅಪರಾಧ ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾ ಇರಿಸಿದ್ದಾರೆ.