ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿರುವ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ.
ಫೋಟೊಗಳಲ್ಲಿ, ವಿದ್ಯಾರ್ಥಿ ಮತ್ತು ಮುಖ್ಯ ಶಿಕ್ಷಕಿ ಆಕ್ಷೇಪಾರ್ಹ ರೀತಿಯಲ್ಲಿ ವಿವಿಧ ಪೋಸ್ ನೀಡಿರುವುದು ಕಂಡುಬಂದಿದೆ. ವಿದ್ಯಾರ್ಥಿಯು ಶಿಕ್ಷಕಿಯ ಕೆನ್ನೆಗೆ ಮುತ್ತಿಡುವುದು ಮತ್ತು ಹಿಂಬದಿಯಿಂದ ಸೆರಗನ್ನ ಎಳೆದು ಇಡಿದಿರುವುದು, ಶಿಕ್ಷಕಿಯನ್ನು ಎತ್ತಿಕೊಂಡಿರುವುದು ಸೇರಿದಂತೆ ವಿವಿಧ ಭಂಗಿಗಳಲ್ಲಿ ಪೋಸ್ ನೀಡಲಾಗಿದೆ.
ಮುಖ್ಯಶಿಕ್ಷಕಿ ಕೂಡ ವಿದ್ಯಾರ್ಥಿಯನ್ನು ತಬ್ಬಿಕೊಂಡು ರೊಮ್ಯಾಂಟಿಕ್ ಆಗಿ ವರ್ತಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಫೋಟೊ ಶೂಟ್ನ ವೀಡಿಯೊ ವೈರಲ್ ಆದ ನಂತರ, ಜನರು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಇಂತಹ ಅನುಚಿತ ವರ್ತನೆಯಲ್ಲಿ ತೊಡಗಿದ್ದಕ್ಕಾಗಿ ಶಿಕ್ಷಕಿಯನ್ನು ದೂಷಿಸಿದ್ದಾರೆ.
ಮುಖ್ಯ ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದು, ಶಾಲೆಗೆ ತೆರಳಿ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಕೆಯ ವರ್ತನೆಗೆ ಸಂಬಂಧಿಸಿದಂತೆ ಪೋಷಕರು ಬ್ಲಾಕ್ ಶಿಕ್ಷಣಾಧಿಕಾರಿಗೆ ದೂರು ಸಲ್ಲಿಸಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.