ಮನೆ ಸುದ್ದಿ ಜಾಲ ಜನವರಿ 17ರಿಂದ ಬೆಂಗಳೂರಿ ಮತ್ತು ಕೋಲ್ಕತದಿಂದ ಅಯೋಧ್ಯೆಗೆ ವಿಮಾನಯಾನ ಆರಂಭ

ಜನವರಿ 17ರಿಂದ ಬೆಂಗಳೂರಿ ಮತ್ತು ಕೋಲ್ಕತದಿಂದ ಅಯೋಧ್ಯೆಗೆ ವಿಮಾನಯಾನ ಆರಂಭ

0

ಬೆಂಗಳೂರು: ಪ್ರಭು ಶ್ರೀರಾಮಚಂದ್ರನ ದೇವಸ್ಥಾನ ಜನವರಿ 22 ರಂದು ಉದ್ಘಾಟನೆಯಾಗಲಿದೆ. ಈ ಉದ್ಘಾಟನೆ ಸಮಯದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಏರ್​ ಇಂಡಿಯಾ ಎಕ್ಸಪ್ರೆಸ್ ಜನವರಿ 17ರಿಂದ ಬೆಂಗಳೂರು ಮತ್ತು ಕೋಲ್ಕತದಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ. ಏರ್​ ಇಂಡಿಯಾ ಎಕ್ಸಪ್ರೆಸ್​ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನವು ಜನವರಿ 17 ರಂದು ಬೆಳಿಗ್ಗೆ 8.05 ಕ್ಕೆ ಹೊರಟು 10.35 ಕ್ಕೆ ಅಯೋಧ್ಯೆಯನ್ನು ತಲುಪಲಿದೆ. ಅದೇ ರೀತಿ ಹಿಂತಿರುಗುವ ವಿಮಾನವು ಅಯೋಧ್ಯೆಯಿಂದ ಮಧ್ಯಾಹ್ನ 3.40 ಕ್ಕೆ ಹೊರಡಲಿದ್ದು, ಸಂಜೆ 6.10 ಕ್ಕೆ ಬೆಂಗಳೂರಿಗೆ ತಲುಪಲಿದೆ.

ಅಯೋಧ್ಯೆ-ಕೋಲ್ಕತ್ತಾ ಮಾರ್ಗದ ವಿಮಾನವು ಅಯೋಧ್ಯೆಯಿಂದ ಬೆಳಿಗ್ಗೆ 11.05 ಕ್ಕೆ ಹೊರಡಲಿದೆ. ಮಧ್ಯಾಹ್ನ 12.50 ಕ್ಕೆ ಕೋಲ್ಕತ್ತಾದಲ್ಲಿ ಲ್ಯಾಂಡ್​ ಆಗಲಿದೆ. ಕೋಲ್ಕತ್ತಾ-ಅಯೋಧ್ಯೆ ವಿಮಾನವು ಕೋಲ್ಕತ್ತಾದಿಂದ ಮಧ್ಯಾಹ್ನ 1:25 ಕ್ಕೆ ಹೊರಡಲಿದ್ದು, ಮಧ್ಯಾಹ್ನ 3.10 ಕ್ಕೆ ಅಯೋಧ್ಯೆಯನ್ನು ಮುಟ್ಟಲಿದೆ.

ಅಯೋಧ್ಯೆ, ಬೆಂಗಳೂರು, ಕೋಲ್ಕತ್ತ ನಡುವೆ ವಾರಕ್ಕೆ ಮೂರು ತಡೆರಹಿತ, ನೇರ ವಿಮಾನ ಯಾನ ಇರಲಿದೆ. ಇದರ ವೇಳಾಪಟ್ಟಿ ಮತ್ತು ಬುಕ್ಕಿಂಗ್ ವ್ಯವಸ್ಥೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ವೆಬ್‌ಸೈಟ್ airindiaexpress.com, ಆಪ್‌ಗಳಲ್ಲಿ ಲಭ್ಯವಿದೆ ಎಂದು ಕಂಪನಿ ತಿಳಿಸಿದೆ.

ಈ ಬಗ್ಗೆ ಎಐ ಎಕ್ಸ್‌ಪ್ರೆಸ್ ಮುಖ್ಯ ವಾಣಿಜ್ಯ ಅಧಿಕಾರಿ ಅಂಕುರ್ ಗಾರ್ಗ್ ಮಾತನಾಡಿ, “ಭಾರತದಾದ್ಯಂತ ಸಂಪರ್ಕಿಸುವ ವಾಯು ಮಾರ್ಗ ಕಾರ್ಯಾಚರಣೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯು ಅಚಲವಾಗಿದೆ. ಅಯೋಧ್ಯೆಯನ್ನು ನವದೆಹಲಿ, ಬೆಂಗಳೂರು, ಕೋಲ್ಕತ್ತಾ ಜೊತೆಗೆ ಜೋಡಿಸುವ ಕೆಲಸವು ಈ ಬದ್ಧತೆಯನ್ನು ದೃಢಪಡಿಸುತ್ತದೆ.