ಬೆಂಗಳೂರು: ಕೊರೋನಾ ವೇಳೆ 40ಸಾವಿರ ಕೋಟಿ ರೂ. ಲೂಟಿ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಆರೋಪ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಬಿಎಸ್ ವೈ ಬೆನ್ನಿಗೆ ನಿಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಎಸ್ ವೈ ಸರ್ಕಾರದಲ್ಲಿ 40 ಸಾವಿರ ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಇದನ್ನು ಯಾರಾದರೂ ನಂಬೋದಕ್ಕೆ ಆಗುತ್ತಾ..? ಮೂರು ಸಾವಿರ ,ನಾಲ್ಕು ಸಾವಿರ ಕೋಟಿ ಎಂದರೇ ಒಪ್ಪೋಣ. ಆದರೆ 40 ಸಾವಿರ ಕೋಟಿ ರೂ ಅಂದ್ರೆ ಒಪ್ಪಲು ಆಗುತ್ತಾ..? ಇದು ರಾಜಕೀಯ ಕಾರಣಕ್ಕೆ ಕೊಟ್ಟ ಹೇಳಿಕೆ ಎಂದು ಬಿಎಸ್ ವೈ ಪರ ಬ್ಯಾಟ್ ಬೀಸಿದರು.
ನಾವೀಗ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ . ಬಿಜೆಪಿ ಪರವಾಗಿ ಎನ್ ಡಿಎ ಪರವಾಗಿ ನಾನು ಹೇಳುತ್ತಿದ್ದೇನೆ. ಕೆಲವು ಹೇಳಿಕೆಗಳಿಗೆ ಮಹತ್ವ ಕೊಡಬೇಕಾಗಿಲ್ಲ. ಅಕ್ರಮ ನಡೆದೇ ಇಲ್ಲ ಅಂತಾ ಹೇಳಲ್ಲ. 40 ಸಾವಿರ ಕೋಟಿ ಅಕ್ರಮ ಅಂದರೇ ನಂಬಲು ಸಾಧ್ಯವೇ..? ಯತ್ನಾಳ್ ಆರೋಪಕ್ಕೆ ನಾನೇ ಸ್ಪಷ್ಟನೆ ಕೊಡುತ್ತೇನೆ. ಕೊರೊನಾ ವೇಳೆ ಸರಿಯಾಗಿ ಕೆಲಸ ಮಾಡಿಲ್ಲ. ಎಲ್ಲಾ ಸರಿ ಇತ್ತು ಅಂತಾ ಹೇಳೋಕೆ ಹೋಗಲ್ಲ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.