ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು. ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ , ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ ಎಂದರು.
ಮನುಷ್ಯತ್ವ ಅಂತಿಮ ಗುರಿಯಾಗಬೇಕು. ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು. ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಚಲನೆ ಉಂಟಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುವವರೆಗೂ ಹೋರಾಟ ನಡೆಸುವ ಗುರಿಯಿಂದಲೇ’ಹೋರಾಟಕ್ಕೆ ಸಾವಿಲ್ಲ’ ಎಂಬ ಕೃತಿಯನ್ನು ಹೊರತರಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟವನ್ನು ಹತ್ತಿಕ್ಕಬಾರದು. ಆದರೆ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು ಎಂದರು.
ಚಿಕ್ಕಬಳ್ಳಾಪುರ ಶ್ರೀ ನಿಡುಮಾಮಿಡಿ ಮಠದ ವತಿಯಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಶ್ರೀ ಮಠವು ಯಾವುದೇ ಜಾತಿ,ಧರ್ಮ, ಸಂಸ್ಕೃತಿಗಳಿಗೆ ಮೀಸಲಾಗದ ಜಾತ್ಯಾತೀತವಾದ ಮಾನವ ಧರ್ಮ ಪೀಠ ಎನಿಸಿದೆ. ಸ್ವಾಮೀಜಿಗಳು ನಿರ್ಭಿತಿಯಿಂದ ನಿಷ್ಕಲ್ಮಶವಾಗಿ ಜಾತ್ಯಾತೀತ ಮಾನವೀಯ ಸಮಾಜ ಸ್ಥಾಪನೆಯಾಗಬೇಕೆಂಬ ಆಶಯವನ್ನು ಹೊಂದಿದ್ದು, ತಮ್ಮ ಜೀವನದುದ್ದಕ್ಜೂ ಆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮಾನವ ಧರ್ಮ ಸ್ಥಾಪಿಸುವ ಶ್ರೀಮಠದ ಗುರಿ ಈಡೇರಿಕೆಗೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.