ಮನೆ ರಾಜಕೀಯ ಅಯೋಧ್ಯೆಯಲ್ಲಿ ರಾಮ ಮಂದಿರ ಬಳಿ ವಾಲ್ಮೀಕಿ ಮಂದಿರ ನಿರ್ಮಾಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಆಗ್ರಹ

ಅಯೋಧ್ಯೆಯಲ್ಲಿ ರಾಮ ಮಂದಿರ ಬಳಿ ವಾಲ್ಮೀಕಿ ಮಂದಿರ ನಿರ್ಮಾಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಆಗ್ರಹ

0

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದ ಬಳಿ ವಾಲ್ಮೀಕಿ ಮಂದಿರವನ್ನೂ ನಿರ್ಮಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ವಾಲ್ಮೀಕಿ ರಾಮಾಯಣ ರಚಿಸಿದ್ದಾರೆ. ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ನಾಮಕರಣ ಮಾಡಿರುವುದು ಸ್ವಾಗತಾರ್ಹ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿರುವುದು ನಮಗೆಲ್ಲಾ ಸಂತಸ ತಂದಿದೆ. ಇದು ಭಾರತೀಯರ ದೀರ್ಘಾವಧಿಯ ಕನಸಾಗಿತ್ತು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣದಿಂದ ಬಿಜೆಪಿಗೆ ರಾಜಕೀಯವಾಗಿ ಲಾಭವಾಗಲಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಚಿವರು, ದೇಶದಲ್ಲಿ ಹಲವು ದೇವಾಲಯಗಳಿವೆ, ಅವುಗಳಲ್ಲಿ ರಾಮಮಂದಿರವೂ ಒಂದು, ರಾಜಕಾರಣ ಎಲ್ಲೆಡೆಯೂ ಇದೆ, ಬಿಜೆಪಿಗೆ ಇದರಿಂದ ಲಾಭವಾಗಲಿದೆಯೇ? ಎಂಬುದು ಚುನಾವಣೆ ಬಳಿಕ ತಿಳಿಯಲಿದೆ ಎಂದು ಹೇಳಿದ್ದಾರೆ.