ಬೆಂಗಳೂರು: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಡೆದ ಎಂಜಿ ರಸ್ತೆಯ ಕೂಗಳತೆ ದೂರದಲ್ಲೇ ವರ್ಷದ ಮೊದಲ ದಿನವೇ ಯುವತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಸುಧಾಮನಗರದಲ್ಲಿ ಬಿಬಿಎ ವಿದ್ಯಾರ್ಥಿನಿ 21 ವರ್ಷದ ವರ್ಷಿಣಿ ಎಂಬುವವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಯುವತಿ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು.
ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆಕೆ ಜೀವನದಲ್ಲಿ ನೊಂದು ಈ ಕೃತ್ಯಕ್ಕೆ ಮುಂದಾಗಿದ್ದಳು ಎಂದು ಹೇಳಲಾಗಿದೆ. ಆಕೆಯ ಸಾವಿಗೆ ನಿಜವಾದ ಕಾರಣ ತಿಳಿದುಬಂದಿಲ್ಲ.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














