ಬೆಂಗಳೂರು: ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.
ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸುನೀಲ್ ಕುಮಾರ್, ರಾಮ ಮಂದಿರ ಉದ್ಘಾಟನೆಯಿಂದ ಇಡೀ ದೇಶವೇ ಖುಷಿ ಪಡುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಶ್ರೀಕಾಂತ ಪೂಜಾರಿ ಎಂಬುವವರನ್ನು ಬಂಧಿಸುವ ಮೂಲಕ ಅಪಶಕುನ ಮಾಡುತ್ತಿದ್ದಾರೆ. ನಾನು ಪಟ್ಟಿ ಕೊಡುತ್ತೇನೆ, ನಿಮಗೆ ತಾಕತ್ ಇದ್ದರೆ ಕರಸೇವಕರನ್ನ ಬಂಧಿಸಿ. ನಾನೂ ಕರ ಸೇವೆಯಲ್ಲಿ ಭಾಗಿಯಾಗಿದ್ದೆ, ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಸರ್ಕಾರ ಹಿಂದುತ್ವದ ಪರ, ಹಿಂದೂಗಳ ಭಾವನೆ ಇದ್ದರೆ ನೂರು ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಿ. ಇನ್ನು ಮನೆ ಮನೆಗಳಲ್ಲಿ ದೀಪ ಬೆಳಗಿಸಿ ಎಂದು ಪ್ರಧಾನಿ ಕರೆ ಕೊಟ್ಟಿದ್ದಾರೆ. ಅದರಂತೆ ಸಿಎಂ ಹಾಗೂ ಸಚಿವರು ಕೂಡ ತಮ್ಮ ಮನೆಯಲ್ಲಿ ನಂದಾ ದೀಪ ಬೆಳಗಿಸಲಿ, ಸಿಎಂ ಕೂಡ ತಮ್ಮ ಕುಟುಂಬ ಸದಸ್ಯರ ಜೊತೆ ಸೇರಿ ದೀಪ ಹಚ್ಚಲಿ ಎಂದು ಸುನೀಲ್ ಕುಮಾರ್ ಸಲಹೆ ನೀಡಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.