ಮನೆ ಸುದ್ದಿ ಜಾಲ ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಸಾವು

ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಸಾವು

0

ವಿಜಯನಗರ: ಇಷ್ಟು ದಿನ ಕಲುಷಿತ ನೀರು ಸೇವನೆಯಿಂದಾಗಿ ಜನ ಅಸ್ವಸ್ಥರಾಗುವ ಘಟನೆಗಳು ಹೆಚ್ಚಾಗಿ ರಾಯಚೂರಿನಲ್ಲಿ ಕಂಡು ಬರುತ್ತಿದ್ದವು. ಈಗ ಆ ನೀರು ವಿಜಯನಗರಕ್ಕೂ ಹರಿದಿದೆ.

ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರು ಅನ್ನೋ ಹಾಗೆ ಈಗ ಅಧಿಕಾರಿಗಳು ನೀರು ಪರಿಶೀಲನೆಗೆ ಮುಂದಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಕಾರಿಗನೂರು ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿಭೇದಿ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮಾತ್ರವಲ್ಲದೆ ನಗರದ 24ನೇ ವಾರ್ಡ್ ಕಾರಿಗನೂರು ಗ್ರಾಮದಲ್ಲಿ ವಾಂತಿಬೇಧಿಯಿಂದಾಗಿ 27 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದಾಗಿ ಶಾಸಕ ಎಚ್. ಆರ್. ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಸಕ ಎಚ್.ಆರ್.ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಕಾರಿಗನೂರು ಶಿಕಾರಿ ಕ್ಯಾಂಪ್‍ಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡದೇ ಇರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ನಗರಸಭೆ ಎಇಇ ಸತೀಶ್ ಹಾಗೂ ಇತರೆ ಅಧಿಕಾರಿಗಳನ್ನು ಸ್ಥಳದಲ್ಲಿಯೇ ತರಾಟೆಗೆ ತೆಗೆದುಕೊಂಡರು.