ಮನೆ ಕ್ರೀಡೆ ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ

ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ

0

ನವದೆಹಲಿ: ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ 2023ನೇ ಸಾಲಿನ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ (ಜ.9) ಶಮಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಇದರೊಂದಿಗೆ ಶಮಿ ಅವರು ಅರ್ಜುನ ಪ್ರಶಸ್ತಿ ಪಡೆದ 58ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.

ಅರ್ಜುನ ಪ್ರಶಸ್ತಿ ಪಡೆದವರಲ್ಲಿ 12 ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಸೇರಿದ್ದಾರೆ. ಈ ಹಿಂದೆ 2021ರಲ್ಲಿ ಶಿಖರ್ ಧವನ್ ಈ ಪ್ರಶಸ್ತಿಯನ್ನು ಪಡೆದಿದ್ದರು. ಅರ್ಜುನ ಪ್ರಶಸ್ತಿ ಪಡೆದ ಮೊದಲ ಕ್ರಿಕೆಟಿಗ  ಸಲೀಂ ದುರಾನಿ. ಅವರನ್ನು 1961 ರಲ್ಲಿ ಗೌರವಿಸಲಾಯಿತು.

ಈ ವರ್ಷದ ಏಕದಿನ ವಿಶ್ವಕಪ್‌ನಲ್ಲಿ ಶಮಿ ಅದ್ಭುತ ಪ್ರದರ್ಶನ ನೀಡಿದ್ದರು. ಗರಿಷ್ಠ 24 ವಿಕೆಟ್ ಪಡೆದು ಟೀಂ ಇಂಡಿಯಾವನ್ನು ಫೈನಲ್ ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.