ಟೊಕಿಯೊ: ಜಪಾನ್ ನಲ್ಲಿ ಮತ್ತೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ ಸಿಎಸ್) ತಿಳಿಸಿದೆ.
ಜಪಾನ್ ನ ಹೊನ್ಶು ದ್ವೀಪದ ಪಶ್ಚಿಮ ಕರಾವಳಿಯಲ್ಲಿ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.
ಭೂಕಂಪದ ಕೇಂದ್ರ ಬಿಂದು 46 ಕಿ.ಮೀ. ಆಳದಲ್ಲಿ ದಾಖಲಾಗಿದೆ. ತೀವ್ರ ಭೂಕಂಪವಾದರೂ ಸುನಾಮಿ ಭೀತಿ ಇಲ್ಲ ಎಂದು ವರದಿ ತಿಳಿಸಿದೆ.
ಜಪಾನ್ ನಲ್ಲಿ ಹೊಸ ವರ್ಷದಂದು ಸಂಭವಿಸಿದ್ದ ಸರಣಿ ಭೂಕಂಪದಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಭಾರಿ ಪ್ರಮಾಣದಲ್ಲಿ ಆಸ್ತಿ ನಷ್ಟವಾಗಿತ್ತು.