ರಾಜ್ಯದಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಮತ್ತು 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಹಿನ್ನೆಲೆಯಲ್ಲಿ ದಾಖಲಿಸಿಕೊಂಡ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಿದೆ.
ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಕುರಿತಂತೆ ಮಾಧ್ಯಮ ವರದಿ ಆಧರಿಸಿ ದಾಖಲಿಸಿಕೊಂಡಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ರಾಜ್ಯ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ: ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟವು (ಎಫ್‌ಐಸಿಸಿಐ) ಕಳೆದ ಸೆಪ್ಟೆಂಬರ್‌ನಲ್ಲಿ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಾಜ್ಯವು ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ ಸಾಧಿಸಬೇಕಾದರೆ ಆರೋಗ್ಯ, ಕೃಷಿ, ಗಣಿ, ಪ್ರವಾಸೋದ್ಯಮ, ಶಿಕ್ಷಣ, ನಗರ ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆ ಕಾಣಬೇಕಿದೆ ಎಂದಿದ್ದು, ಇದಕ್ಕೆ ಸಂಬಂಧಿಸಿದಂತೆ 260 ಸಲಹೆಗಳನ್ನು ನೀಡಿದೆ.
ವರದಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 454 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ ಎನ್ನಲಾಗಿದೆ. ಇದರಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ನರ್ಸ್‌ಗಳು, 1,517 ಲ್ಯಾಬ್ ಟೆಕ್ನೀಶಿಯನ್ಸ್, 1,512 ಫಾರ್ಮಸಿಸ್ಟ್, 1,752 ಸಹಾಯಕರು ಮತ್ತು 3,253 ʼಡಿʼ ಗ್ರೂಪ್ ಸಿಬ್ಬಂದಿ ಹುದ್ದೆಗಳು ಸೇರಿವೆ ಎಂದು ಎಫ್‌ಐಸಿಸಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನು ಆಧರಿಸಿ ಮಾಧ್ಯಮವೊಂದು ವರದಿ ಪ್ರಕಟಿಸಿತ್ತು. ಈ ವರದಿಯ ಸಂಜ್ಞೇ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.