ಮನೆ ರಾಷ್ಟ್ರೀಯ ತೆಲಂಗಾಣ: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ತೆಲಂಗಾಣ: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

0

ತೆಲಂಗಾಣ: ಕೃಷಿ ಭೂಮಿಗೆ ಹೋಗುವ ದಾರಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ ತೆಲಂಗಾಣದ ಮೊಯಿನಾಬಾದ್ ​ನಲ್ಲಿ ನಡೆದಿದೆ.

ಮಹಿಳೆಯ ದೇಹ ಶೇ.90ರಷ್ಟು ಸುಟ್ಟು ಹೋಗಿತ್ತು. ತಮ್ಮ ಜಮೀನಿಗೆ ತೆರಳುತ್ತಿದ್ದ ರೈತರು ಸುಟ್ಟ ಶವವನ್ನು ಗಮನಿಸಿ ಮೊಯಿನಾಬಾದ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಆರೋಪಿಗಳು ಆಕೆಯನ್ನು ಕೊಲೆ ಮಾಡಿ ಕೃಷಿ ಭೂಮಿಗೆ ತಂದು ಸುಟ್ಟು ಹಾಕಿರಬೇಕು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಯಾವುದೇ ಮಹಿಳೆ ಕಾಣೆಯಾಗಿರುವ ಬಗ್ಗೆ ದೂರು ಬಂದಿದ್ದರೆ ಅದರ ಬಗ್ಗೆ ಮಾಹಿತಿ ನೀಡುವಂತೆ ಹೈದರಾಬಾದ್, ಸೈಬರಾಬಾದ್ ಮತ್ತು ರಾಚಕೊಂಡದಲ್ಲಿ ಮಾಹಿತಿಯನ್ನು ಪ್ರಸಾರ ಮಾಡಿದ್ದೇವೆ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.