ಮನೆ ಅಪರಾಧ ರಾಮನಗರ: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ

ರಾಮನಗರ: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ

0

ರಾಮನಗರ: 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ 65 ವರ್ಷದ ವೃದ್ಧ ಅತ್ಯಾಚಾರ ಮಾಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಾಕಲೇಟ್ ಕೊಡಿಸುವುದಾಗಿ ಹೇಳಿ ಬಟ್ಟೆ ಬಿಚ್ಚಿಸಿದ ಆರೋಪ ಮಾಡಲಾಗಿದೆ.

ತಾಯಿ‌ ಮನೆಗೆ ವಾಪಾಸ್ ಆದಾಗ ಬಾಲಕಿ ಅಳುತ್ತಿದ್ದಳು. ಯಾಕೆ ಅಳುತ್ತಿದ್ದೀಯಾ ಎಂದು ಕೇಳಿದಾಗ, ಅಳುತ್ತಲೇ ತನ್ನ ಗುಪ್ತಾಂಗ ತೋರಿಸಿದ್ದಾಳೆ. ಯಾರು ಮಾಡಿದ್ದು ಅಂತ ಕೇಳಿದಾಗ ಸನ್ನೆ ಮಾಡಿ ಅಜ್ಜ‌ನ ಬಗ್ಗೆ ಬಾಲಕಿ ಹೇಳಿದ್ದಾಳೆ. ಕೂಡಲೇ ಅಜ್ಜನನ್ನು ಹಿಡಿದ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಬಳಿಕ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಅಜ್ಜ ಒಪ್ಪಿಕೊಂಡಿದ್ದಾರೆ.

ಸರ್ಕಾರಿ ಆಸ್ಪತ್ರೆ ಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.