ಮನೆ ರಾಜ್ಯ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂಸದ ಪ್ರತಾಪ್ ಸಿಂಹ

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂಸದ ಪ್ರತಾಪ್ ಸಿಂಹ

0

ರಾಮನಗರ: ಈಗಿನಿಂದಲೇ ಲೋಕಸಭೆ ಚುನಾವಣೆ  ರಾಜಕೀಯ ಚಟುವಟಿಕೆ ಗರಿಗೆದರುತ್ತಿದ್ದು, ಈ ನಡುವೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ.

ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಬಿಡದಿಯ ತೋಟಕ್ಕೆ ತೆರಳಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಕೆಲ ಕಾಲ ಚರ್ಚೆ ನಡೆಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಹಲವು ವಿಷಯಗಳನ್ನು ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವ ಹಿನ್ನೆಲೆ ಮೈಸೂರು-ಕೊಡಗು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ  ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ವಿಚಾರವಾಗಿ, ಲೋಕಸಭೆ ಎಲೆಕ್ಷನ್ ಗೆ ಸಹಕಾರ ನೀಡುವಂತೆ ಪ್ರತಾಪ್ ಸಿಂಹ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.