ಮನೆ ರಾಜ್ಯ ಜಮ್ಮು ಕಾಶ್ಮೀರ: ಸೇನಾ ವಾಹನದ ಮೇಲೆ ಗುಂಡಿನ ದಾಳಿ- ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭ

ಜಮ್ಮು ಕಾಶ್ಮೀರ: ಸೇನಾ ವಾಹನದ ಮೇಲೆ ಗುಂಡಿನ ದಾಳಿ- ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭ

0

ಶ್ರೀನಗರ: ಜಮ್ಮು ಕಾಶ್ಮೀರದ ಪೂಂಛ್ ನಲ್ಲಿ ಮತ್ತೆ ಭಯೋತ್ಪಾದಕರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಇದಕ್ಕೆ ಪ್ರತಿಯಾಗಿ ಸೇನೆಯು ಗುಂಡಿನ ದಾಳಿ ನಡೆಸಿದ್ದು ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಪೂಂಛ್ ನ ಕೃಷ್ಣ ಘಾಟಿ ಪ್ರದೇಶದ ಬಳಿ ಇರುವ ಬೆಟ್ಟದ ಮೇಲಿಂದ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆದಿರುವುದಾಗಿ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ತಲೆಮರೆಸಿಕೊಂಡಿರುವ ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸೇನೆ ‘ಕೃಷ್ಣ ಘಾಟಿ (ಇನ್) ಪೂಂಛ್ ಸೆಕ್ಟರ್ ಬಳಿಯ ಕಾಡಿನಲ್ಲಿ ಶಂಕಿತ ಭಯೋತ್ಪಾದಕರು ಭದ್ರತಾ ಪಡೆಗಳ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು ಸೇನಾ ಪಡೆ ಪ್ರತಿಯಾಗಿ ನಡೆಸಿದ ಸಂದರ್ಭ ಭಯೋತ್ಪಾದಕರು ಕಾಡಿನೊಳಗೆ ಅವಿತು ಕುಳಿತಿರುವ ಶಂಕೆ ಇದ್ದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಅಲ್ಲದೆ ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸೇನೆ ತಿಳಿಸಿದೆ.

ಈ ಪ್ರದೇಶದಲ್ಲಿ ಭಯೋತ್ಪಾದಕರ ವಿನ್ಯಾಸವನ್ನು ವಿಫಲಗೊಳಿಸಲು ಹೊಸ ವರ್ಷಕ್ಕೆ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಯೋಜನೆಯನ್ನು ರೂಪಿಸಲು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಭದ್ರತಾ ಸಭೆಯ ನಂತರ ಈ ಘಟನೆ ನಡೆದಿದೆ.