ಮನೆ Uncategorized 4 -5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್ ಹಗುರಗೊಳಿಸಲಾಗುತ್ತದೆ: ಸಚಿವ ಬಿ.ಸಿ.ನಾಗೇಶ್

4 -5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್ ಹಗುರಗೊಳಿಸಲಾಗುತ್ತದೆ: ಸಚಿವ ಬಿ.ಸಿ.ನಾಗೇಶ್

0

ಬೆಂಗಳೂರು(Bengaluru): 3ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಯಾವುದೇ ಹೋಂವರ್ಕ್ ನ್ನು ಸರ್ಕಾರ ಅನುಮತಿಸುವುದಿಲ್ಲ, ಆದರೆ, 4 ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್ ಹಗುರಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಕಾರ 4 ಮತ್ತು 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್’ನ್ನು ಹಗುರಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಮೇ ಎರಡನೇ ಅಥವಾ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸ್ಟಾಕ್ ಹೋಲ್ಡರ್ಸ್ ಗಳು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶಾಲಾಸಮವಸ್ತ್ರಕ್ಕೆ ವಿಧಿಸುತ್ತಿರುವ ವೆಚ್ಚ ಭಾರೀ ಮೊತ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸಮವಸ್ತ್ರಕ್ಕೆ ಮರು ಟೆಂಡರ್ ಕರೆಯಲಾಗುತ್ತದೆ ಎಂದಿದ್ದಾರೆ.