ಮಥುರಾ: ಮಥುರಾದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ದಟ್ಟ ಮಂಜಿನಿಂದಾಗಿ ಎರಡು ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ, ಈ ಅಪಘಾತದಲ್ಲಿ ಎರಡೂ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದ 40 ಮಂದಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಗಾಯಗೊಂಡ ಪ್ರಯಾಣಿಕರಲ್ಲಿ 31 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ 9 ಮಂದಿಯನ್ನು ಮಥುರಾದ ಇತರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮಾಹಿತಿಯ ಪ್ರಕಾರ, ಒಂದು ಬಸ್ ಧೋಲ್‌ಪುರ (ರಾಜಸ್ಥಾನ) ನಿಂದ ನೋಯ್ಡಾಗೆ ಹೋಗುತ್ತಿತ್ತು ಮತ್ತು ಇನ್ನೊಂದು ಬಸ್ ಇಟಾವಾದಿಂದ ನೋಯ್ಡಾಕ್ಕೆ ಹೋಗುತ್ತಿತ್ತು.
ಆಗ್ರಾದಿಂದ ನೊಯ್ಡಾ ಮಾರ್ಗವಾಗಿ ಬೆಳಗಿನ ಜಾವ 3 ಗಂಟೆಗೆ ಎರಡು ಬಸ್ ಗಳ ನಡುವೆ ಭಾರಿ ಡಿಕ್ಕಿ ಸಂಭವಿಸಿದೆ.
ಮಥುರಾದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೋಸ್ಟ್ ಮಾಡಿದ್ದು, ಮಥುರಾ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರಿಗೆ ಕೂಡಲೇ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ರಾಯ್ ಬರೇಲಿಯಲ್ಲಿ ತಡರಾತ್ರಿ ವೇಗವಾಗಿ ಬಂದ ಡಂಪರ್ ವೊಂದು ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿತ್ತು, ವಿದ್ಯುತ್ ಕಂಬವನ್ನೂ ಮುರಿದಿದೆ. ಈ ಅಪಘಾತದಿಂದ ಕುಟುಂಬಸ್ಥರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಟ್ರಕ್ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಖೀರೋನ್ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಹುಸೇನಾಬಾದ್ ನಲ್ಲಿ ಈ ಘಟನೆ ನಡೆದಿದೆ.