ಮನೆ ಅಪರಾಧ ಶಿರಡಿಯಲ್ಲಿ ಭೀಕರ ಅಪಘಾತ: 6 ಮಂದಿ ದುರ್ಮರಣ

ಶಿರಡಿಯಲ್ಲಿ ಭೀಕರ ಅಪಘಾತ: 6 ಮಂದಿ ದುರ್ಮರಣ

0

ಶಿರಡಿ(ಮಹಾರಾಷ್ಟ್ರ): ಟ್ರಕ್​​-ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಹಮದ್​​ನಗರದ ಶಿರಡಿಯಲ್ಲಿ ನಡೆದಿದೆ.

ಸಾವೀಗೀಡಾದವರಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು, ಇಬ್ಬರು ಮಹಿಳೆಯರು ಮತ್ತು ಮತ್ತಿಬ್ಬರು ಪುರುಷರು ಸೇರಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಕೋಪರಗಾಂವ್ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್​​ಪೆಕ್ಟರ್​​ ಭೇಟಿ ನೀಡಿದ್ದು, ಗಾಯಾಳುಗಳನ್ನು ಕೋಪರಗಾಂವ್ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗ್ಗೆ 8.30ರಿಂದ 9ರ ನಡುವೆ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕೋಪರ್‌ಗಾಂವ್‌ನಿಂದ ಬಂದ ಕಂಟೈನರ್ ಪ್ರಯಾಣಿಕರನ್ನು ಸಾಗಿಸುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.