ಮನೆ ರಾಜ್ಯ ಐದು ವರ್ಷನೋ, ಎರಡು ವರ್ಷನೋ ಹೈಕಮಾಂಡ್ ತೀರ್ಮಾನಿಸಲಿದೆ: ಶಾಸಕ ಲಕ್ಷ್ಮಣ್ ಸವದಿ

ಐದು ವರ್ಷನೋ, ಎರಡು ವರ್ಷನೋ ಹೈಕಮಾಂಡ್ ತೀರ್ಮಾನಿಸಲಿದೆ: ಶಾಸಕ ಲಕ್ಷ್ಮಣ್ ಸವದಿ

0

ಕಲಬುರ್ಗಿ: ಹೈಕಮಾಂಡ್ ಮನಸ್ಸು ಮಾಡಿದ್ರೂ ಎರಡೇ ವರ್ಷ ಸಿಎಂ ಆಗಬಹುದು ಅಥವಾ  5 ವರ್ಷ ಸಿಎಂ ಆಗಬುಹುದು.  ಐದು ವರ್ಷನೋ 2 ವರ್ಷನೋ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ಲಕ್ಷ್ಮಣ್ ಸವದಿ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ನಂದ್ ಕುಮಾರ್ ಹೆಗಡೆ ಅವರು ಏಕವಚನ ಪ್ರಯೋಗ ವಿಚಾರ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಣ್ ಸವದಿ, ಈ ರೀತಿ ಹೇಳಿಕೆಗಳಿಂದ ಅವರ ಬೆಲೆ ಕಡಿಮೆಯಾಗುತ್ತದೆ. ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ 5 ವರ್ಷ ನಾಪತ್ತೆಯಾಗಿದ್ದರು. ಕ್ಷೇತ್ರದ ಜನರನ್ನು ಸಂಸದ ಅನಂತ್ ಕುಮಾರ್ ಹೆಗಡೆ ಭೇಟಿಯಾಗಿಲ್ಲ. ಈಗ ಟಿಕೆಟ್ ಪಡೆಯಲು ಹೆಗಡೆ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿಯ ಹೇಳಿಕೆಗಳಿಂದ ಅವರ ಬೆಲೆ ಕಡಿಮೆಯಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಕೂಡ ಅವರಿಗೆ ಇಲ್ಲ ಎಂದು ಟಾಂಗ್ ನೀಡಿದರು.