ಮನೆ ರಾಜ್ಯ ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಕಾಂಗ್ರೆಸ್​ ಪಕ್ಷಕ್ಕೆ ಅಂಟಿದ ಕುಷ್ಠ ರೋಗ: ಬಿಜೆಪಿ ಕಿಡಿ

ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಕಾಂಗ್ರೆಸ್​ ಪಕ್ಷಕ್ಕೆ ಅಂಟಿದ ಕುಷ್ಠ ರೋಗ: ಬಿಜೆಪಿ ಕಿಡಿ

0

ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ಮೂಲಕ ಬಿಜೆಪಿಯವರು ರಾಜಕೀಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ನಾವು ಈ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಕಾಂಗ್ರೆಸ್​ ನಾಯಕರು ಘೋಷಿಸಿದ್ದಾರೆ.

ಈ ಕಾರ್ಯಕ್ರಮವನ್ನು ವಿರೋಧಿಸುವ ಭರದಲ್ಲಿ ಸಚಿವ ಕೆನ್​ ರಾಜಣ್ಣ, “ಬಾಬ್ರಿ ಮಸೀದಿ ಕೆಡವಿದ ನಂತರ ಅಯೋಧ್ಯೆಗೆ ಹೋಗಿದೆ. ಅಲ್ಲಿ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನು ಇಟ್ಟು ರಾಮ ರಾಮ ಎನ್ನುತ್ತಿದ್ದರು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟನೆ ಸರಣಿ ಟ್ವೀಟ್​ ಮಾಡಿ ಸಚಿವರ ವಿರುದ್ಧ ವಾಗ್ದಾಳಿ ಮಾಡಿದೆ.

ಲೆಕ್ಕ? ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಕಾಂಗ್ರೆಸ್​ ಪಕ್ಷಕ್ಕೆ ಅಂಟಿದ ಕುಷ್ಠ ರೋಗವಿದ್ದಂತೆ” ಎಂದು ಬಿಜೆಪಿ ಹ್ಯಾಷ್​​ ಟ್ಯಾಗ್​ ರಾಮ ವಿರೋಧಿ ಕಾಂಗ್ರೆಸ್​ ಅಂತ ಟ್ವೀಟ್​ ಮಾಡಿದೆ.

ಮುಂದುವರೆದು “ಶತ ಶತಮಾನಗಳ ಕೋಟ್ಯಂತರ ರಾಮಭಕ್ತರ ಹೋರಾಟ, ಸಹಸ್ರಾರು ಕರಸೇವಕರ ಬಲಿದಾನಗಳಿಂದ ಭವ್ಯ ರಾಮಮಂದಿರದಲ್ಲಿ ಬಾಲರಾಮ ನೆಲೆಸುತ್ತಿರುವ ಸಮಯದಲ್ಲಿ, ಶ್ರೀರಾಮ ಸೀತೆಯರನ್ನು ಗೊಂಬೆಗೆ ಹೋಲಿಸುತ್ತಿರುವ ಸಹಕಾರ ಸಚಿವ ರಾಜಣ್ಣರವರೇ, ನಾಡಿನ ಜನರಷ್ಟೇ ಅಲ್ಲ, ನಿಮ್ಮನ್ನು ಕಾಂಗ್ರೆಸ್​ ಕಾರ್ಯಕರ್ತರೂ ಕ್ಷಮಿಸಲಾರರು. ಅಧಿಕಾರದ ಮದ, ಕಾಂಗ್ರೆಸ್ ಗುಲಾಮಿತನದಿಂದ ಹೊರಬಂದು, ನಿಮ್ಮ ಕ್ಷೇತ್ರದ ಮತದಾರರನ್ನಾದರೂ ಕೇಳಿ, ನಿಮ್ಮ ಕುಟುಂಬಸ್ಥರನ್ನಾದರೂ ಕೇಳಿ ತಿಳಿಯಿರಿ” ಎಂದು ಕಿವಿ ಹಿಂಡಿದೆ.