ಮನೆ ರಾಜ್ಯ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಮಾದಿಗ ಮುಖಂಡರ ಪ್ರತ್ಯೇಕ ಸಭೆ

ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಮಾದಿಗ ಮುಖಂಡರ ಪ್ರತ್ಯೇಕ ಸಭೆ

0

ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡದೇ ಮಾದಿಗ ಜನಾಂಗವನ್ನು ಕಡೆಗಣಿಸಲಾಗಿದೆ, ಬೃಹತ ಜನಸಂಖ್ಯೆಯನ್ನು ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕೆಂದು ಮಾದಿಗ ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ.


ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಮಾದಿಗ ಸಮಾನ ಮನಸ್ಕರ ವೇದಿಕೆ ವತಿಯಿಂದ ನಡೆದ ಸಭೆಯಲ್ಲಿ ಮಾತನಾಡಿದ ಮಾದಿಗ ಸಮುದಾಯದ ಮುಖಂಡ ಮುನಿರಾಜು, ಮಾದಿಗ ಸಮುದಾಯ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಸಾಕಷ್ಟು ಕೆಲಸ ಮಾಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾದಿಗ ಸಮುದಾಯದ ಬೆಂಬಲ ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ ಮಾಜಿ ಸಚಿವ ಶಿವಣ್ಣ, ಕೆ.ಬಿ.ಕೃಷ್ಣಮೂರ್ತಿ ಸೇರಿದಂತೆ ಯಾರದಾರೂ ಒಬ್ಬರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಇಲ್ಲವಾದಲ್ಲಿ ಮಾದಿಗ ಸಮುದಾಯದ ಮುನಿಸನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಮಾಜಿ ರಾಜ್ಯ ಸಭಾ ಸದಸ್ಯ ಕೆ.ಬಿ.ಕೃಷ್ಣಮೂರ್ತಿ, ಮಾಜಿ ಸಚಿವ ಕೋಟೆ ಶಿವಣ್ಣ, ಮಾಜಿ ಸಚಿವ ದೇವೇಂದ್ರ ನಾಥ್, ಬಿಜೆಪಿ ಮುಖಂಡ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಸಭೆಯ ಬಳಿಕ ಯಡಿಯೂರಪ್ಪ ಅವರ ಕರೆಯ ಮೇರೆಗೆ ಅವರ ನಿವಾಸಕ್ಕೆ ಬೇಟಿ ನೀಡಿದ ಮಾದಿಗ ಸಮುದಾಯದ ಮುಖಂಡರು ಮಾಜಿ ಸಚಿವ ಗೋವಿಂದ ಕಾರಜೋಳ ಜತೆ ಸೇರಿ ಸಭೆ ನಡೆಸಿ ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿ ದ ಮಾಜಿ ಸಂಸದ ಕೆ.ಬಿ.ಕೃಷ್ಣಮೂರ್ತಿ, ಮಾದಿಗ ಸಮುದಾಯ ಬಿಜೆಪಿ ಪಕ್ಷವನ್ನು ಅನೇಕ ಚುನಾವಣೆಗಳನ್ನು ಗೆಲ್ಲಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ.ಅಧಿಕ ಜನಸಂಖ್ಯೆಯನ್ನು ಹೊಂದಿರುವ ಮಾದಿಗ ಸಮುದಾಯದ ಮುಖಂಡ ಪ್ರಮುಖ ಹುದ್ದೆಗಳನ್ನು ನೀಡಬೇಕೆಂದು ವರಿಷ್ಠರಾದ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದೇವೆ.ಇದನ್ನು ಸರಿಪಡಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.