ಮನೆ ರಾಷ್ಟ್ರೀಯ ಜ.22 ರಂದು 19 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಿರುವ ದ್ರೌಪದಿ ಮುರ್ಮು

ಜ.22 ರಂದು 19 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಿರುವ ದ್ರೌಪದಿ ಮುರ್ಮು

0

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 19 ಮಕ್ಕಳಿಗೆ ಸೋಮವಾರ (ಜ.22) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪಡೆದ ಈ ಮಕ್ಕಳೊಂದಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಲಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಮತ್ತು 18 ರಾಜ್ಯಗಳ ಒಟ್ಟು 9 ಬಾಲಕರು ಹಾಗೂ 10 ಬಾಲಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ

2024 ಅನ್ನು ಆರು ವಿಭಾಗಗಳಲ್ಲಿ ನೀಡಲಾಗುತ್ತಿದೆ. ಕಲೆ ಮತ್ತು ಸಂಸ್ಕೃತಿ (7), ಶೌರ್ಯ (1) ವಿಜ್ಞಾನ ಮತ್ತು ತಂತ್ರಜ್ಞಾನ (1), ಸಾಮಾಜಿಕ ಸೇವೆ (4) ಕ್ರೀಡೆ (5) ಹಾಗೂ ಆವಿಷ್ಕಾರ ಕ್ಷೇತ್ರದಲ್ಲಿ ಒಬ್ಬರಿಗೆ ಪ್ರಶಸ್ತಿ ನೀಡಲಾಗುತ್ತಿದೆ.

5 ರಿಂದ 18 ವರ್ಷದೊಳಗಿನ ಮಕ್ಕಳ ಸಾಧನೆಯನ್ನು ಗುರುತಿಸಿ ಗೌರವಿಸುವುದೇ ಈ ಪ್ರಶಸ್ತಿಯ ಮುಖ್ಯ ಉದ್ದೇಶವಾಗಿದೆ. ಪ್ರಶಸ್ತಿಯು ಪದಕ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿರಲಿದೆ.

ರಾಜ್ಯದ ಚಾರ್ವಿ ಅನಿಲ್‌ ಕುಮಾರ್‌ ಗೆ ಪ್ರಶಸ್ತಿ

ಕರ್ನಾಟಕದ ಚೆಸ್ ಮಾಸ್ಟರ್‌ ಚಾರ್ವಿ ಅನಿಲ್‌ ಕುಮಾರ್ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ 2024 ಗೆ ಆಯ್ಕೆಯಾಗಿದ್ದಾರೆ.

ಒಂಬತ್ತು ವರ್ಷದ ಚಾರ್ವಿ 2022 ರಲ್ಲಿ ಜಾರ್ಜಿಯಾದಲ್ಲಿ ನಡೆದ ವಿಶ್ವ ಕೆಡೆಟ್ಸ್ ಚೆಸ್ ಚಾಂಪಿಯನ್‌ ಶಿಪ್‌ನಲ್ಲಿ 8 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಿದ್ದರು.