ಚಿತ್ರದುರ್ಗ: ಚಲಿಸುತ್ತಿದ್ದ ಕಾರು ಪಲ್ಟಿಯಾದ ಪರಿಣಾಮ ಮೂವರು ಮೃತಪಟ್ಟು ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಶುಕ್ರವಾರ ಸಂಭವಿಸಿದೆ.
ಮೃತರೆಲ್ಲರೂ ಬಳ್ಳಾರಿಯ ಸಿರುಗುಪ್ಪ ಮೂಲದವರೆಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ರಾಂಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರು ಬೆಂಗಳೂರಿನಿಂದ ಅಜ್ಜಿಯ ಶವವನ್ನು ಸಿರುಗುಪ್ಪಗೆ ಕೊಂಡೊಯ್ಯುತ್ತಿದ್ದರು. ರಾಂಪುರ ಬಳಿಯ ಗ್ರ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಕಾರಿನ ಟೈರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪಿಎಸ್ ಐ ಪರಶುರಾಮ್ ಲಮಾಣಿ ಪರಿಶೀಲನೆ ನಡೆಸಿದರು. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.