ಮನೆ ಅಪರಾಧ ಮಂಗಳೂರು ವಿವಿಯ ಉದ್ಯೋಗಿಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಇಡಿ ಅಧಿಕಾರಿಗಳಿಂದ ದಾಳಿ, ಪರಿಶೀಲನೆ

ಮಂಗಳೂರು ವಿವಿಯ ಉದ್ಯೋಗಿಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಇಡಿ ಅಧಿಕಾರಿಗಳಿಂದ ದಾಳಿ, ಪರಿಶೀಲನೆ

0

ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದಲ್ಲಿ ಇತ್ತೀಚೆಗೆ ನಡೆದ ಉದ್ಯೋಗಿಗಳ ನೇಮಕಾತಿಯಲ್ಲಿ 150 ಕೋಟಿ ರೂ. ಅಕ್ರಮ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಕೊಣಜೆಯಲ್ಲಿರುವ ಮಂಗಳೂರು ವಿಶ್ವ ವಿದ್ಯಾನಿಲಯದ ಮೇಲೆ ದಾಳಿ, ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

ಮಂಗಳೂರು ವಿವಿಯ ಕುಲಪತಿ, ರಿಜಿಸ್ಟ್ರಾರ್, ಬ್ಯಾಂಕ್ ಆಫೀಸ್ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದು, ಹಗರಣ ಸಂಬಂಧ ದಾಖಲೆಗಳನ್ನ ಸೀಜ್ ಮಾಡಿದ್ದಾರೆ ಎನ್ನಲಾಗಿದೆ.  ದಾಳಿಯ ಸಮಯದಲ್ಲಿ, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (ಕೋಚ್ ಮುಲ್) ರೂ.150 ಕೋಟಿ ನೇಮಕಾತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ವಿ.ವಿ. ಪರೀಕ್ಷಾಂಗ ಕುಲಸಚಿವರ ಕಚೇರಿಯಲ್ಲಿ ಅಧಿಕಾರಿಗಳ ತಂಡ ಹಲವು ಹೊತ್ತು ಪರಿಶೀಲನೆ ನಡೆಸಿದ್ದಾರೆ. ಜತೆಗೆ ವಿ.ವಿ.ಯ ಕೆಲವು ವಿಭಾಗಗಳಿಗೂ ತೆರಳಿ ಪರಿಶೀಲನೆ ನಡೆಸಲಾಗಿದೆ.

ಕೋಚಿಮುಲ್ ನೇಮಕಾತಿ ಪ್ರಕ್ರಿಯೆಯ ಪ್ರಶ್ನೆಪತ್ರಿಕೆ ಸಿದ್ಧತೆ, ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆ ಉಸ್ತುವಾರಿಯನ್ನು ಮಂಗಳೂರು ವಿ.ವಿ. ವಹಿಸಿಕೊಂಡಿತ್ತು. ಪ್ರಶ್ನೆಪತ್ರಿಕೆ ವಿಚಾರದಲ್ಲಿ ಕೆಲವು ಅನುಮಾನಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳ ತಂಡ ಮಂಗಳೂರು ವಿ.ವಿ.ಗೆ ಆಗಮಿಸಿ ತನಿಖೆ ನಡೆಸಿದೆ ಎನ್ನಲಾಗುತ್ತಿದೆ.