ಮೈಸೂರು (Mysuru)- ‘ಕವಲಂದೆ ಬೋಲೆ ತೋ ಛೋಟಾ ಪಾಕಿಸ್ತಾನ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ನಂಜನಗೂಡು ಪೊಲೀಸರು ಬಂಧಿಸಿದ್ದಾರೆ.
ಫಯಾಜ್ ಮತ್ತು ಫಯಾಜ್ ಅಲಿ ಖಾನ್ ಬಂಧಿತ ಆರೋಪಿಗಳು. ‘ಕವಲಂದೆ ಬೋಲೆ ತೋ ಛೋಟಾ ಪಾಕಿಸ್ತಾನ್’ ಎನ್ನುವ ಹಿನ್ನೆಲೆ ಧ್ವನಿ ಇರುವ ವೀಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿತ್ತು. 30 ಸೆಕೆಂಡ್ ಗಳ ವಿಡಿಯೋದಲ್ಲಿ ಆರೋಪಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು.
ಈದ್ ಉಲ್ ಫಿತ್ರ ಹಬ್ಬದಂದು ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿರುವುದಲ್ಲದೇ ಮುಖ್ಯಮಂತ್ರಿಗಳ ಕಚೇರಿ ತಲುಪಿತ್ತು.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ವೀಡಿಯೋ ಮಾಡಿರುವರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ಬಂದ ಹಿನ್ನೆಲೆ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.