ಮನೆ ಸ್ಥಳೀಯ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ವಸ್ತ್ರಸಂಹಿತೆ ಜಾರಿ

ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ವಸ್ತ್ರಸಂಹಿತೆ ಜಾರಿ

0

ಮೈಸೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಪುರುಷ ಮತ್ತು ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜ. 28 ರಂದು ಬೆಳಗ್ಗೆ 11 ಯಿಂದ ಮದ್ಯಾಹ್ನ 12.30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ.

ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‌ಗಳು ದೊಡ್ಡ ಬಟನ್‌ಗಳು ಇರುವ ಶರ್ಟ್ ಗಳನ್ನು ಧರಿಸತಕ್ಕದ್ದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷ್ಯೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.