ಮನೆ ಸ್ಥಳೀಯ ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ

0

ಮೈಸೂರು: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜನವರಿ 24 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.

ಅoದು ಬೆಳಿಗ್ಗೆ 10 ಗಂಟೆಗೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಭಾರತ್ ಮಾತಾ ಶಾಲಾ ಮುಂಭಾಗದ ಮೈದಾನದಲ್ಲಿ ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ನಿಯಮಿತ ವತಿಯಿಂದ ಆಯೋಜಿಸಿರುವ “ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಮಾಡುವರು ಮತ್ತು ಸಾರ್ವಜನಿಕ ಸಭೆ” ಯನ್ನು ನಡೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ.