ಚಿಕ್ಕಮಗಳೂರು: ಚಿಕ್ಕಮಗಳೂರು ಹೊರ ವಲಯದ ಮತ್ತಾವರ ಬಳಿ ಹುಲಿ ತಲೆ, ನಾಲ್ಕು ಉಗುರು, ಎರಡು ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಹುಲಿ ಅಂಗಾಂಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ವಿಚಾರ ತಿಳಿದು DFO ರಮೇಶ್ ಬಾಬು ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಹುಲಿ ಅಂಗಾಂಗ ಮಾರಾಟ ಮಾಡಲು ಮುಂದಾಗಿದ್ದ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದ ಸತೀಶ್, ಚಂದ್ರೇಗೌಡ ಎಂಬವರನ್ನು ಬಂಧಿಸಿದ್ದಾರೆ.
ಮೂಡಿಗೆರೆ ಅರಣ್ಯ ಇಲಾಖೆಯ ಕಚೇರಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಂದ ಹುಲಿ ತಲೆ, ಹುಲಿ ಉರುಗರು, ಹಲ್ಲು, ಬೈಕ್ ಸೇರಿದಂತೆ ನಾಲ್ಕು ಮೊಬೈಲ್ ಗಳನ್ನ ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.