ಮನೆ ರಾಜ್ಯ ಗಣರಾಜ್ಯೋತ್ಸವ: ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಗಣರಾಜ್ಯೋತ್ಸವ: ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

0

ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಶುಕ್ರವಾರ 75ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಅಂದು ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ ಎಡಿಜಿಪಿ ಸೌಮೇಂದ್ರ ಮುಖರ್ಜಿ ಹಾಗೂ ಡಿವೈಎಸ್​ ಪಿ ಸುಧೀರ್ ಮಹದೇವ್ ಹೆಗ್ಡೆಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ಐಜಿಪಿ ಪ್ರವೀಣ್ ಮಧುಕರ್ ಪವಾರ್, ಐಜಿಪಿ ರಮಣ್ ಗುಪ್ತಾ, ಎಎಸ್​​ಪಿ ಅನಿಲ್​​ಕುಮಾರ್.ಎಸ್, ಎಸಿಪಿ ಶಿವಗಂಗೆ ಪುಟ್ಟರಂಗಪ್ಪ, ಡಿವೈಎಸ್​​ಪಿ ರಘು ಕುಮಾರ್, ಎಸಿಪಿ ನಾರಾಯಣಸ್ವಾಮಿ, ಡಿವೈಎಸ್​​ಪಿ ಶ್ರೀನಿವಾಸ್ ರಾಜ್ ಬೆಟೋಲಿ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಪೊಲೀಸ್​ ಇನ್ಸ್ ​​ಪೆಕ್ಟರ್​ ಮಾಸ್ತೇನಹಳ್ಳಿ ರಾಮಪ್ಪ ಹರೀಶ್, ಇನ್ಸ್ ​​ಪೆಕ್ಟರ್ ಸಣ್ಣ ರಂಗಪ್ಪ ವಿರೇಂದ್ರ ಪ್ರಸಾದ್, ಸಬ್​ ಇನ್ಸ್​​ ಪೆಕ್ಟರ್ ದಾದಾಪೀರ್ ಕಣ್ಣೂರ್ ಸಾಬ್, ವೈರಲೆಸ್ ಎಎಸ್​ಐ​ ಸುರೇಶ್ ರಾಮಪ್ಪ ಪುಂಡಲಿಕಟ್ಟಿ, ಎಎಸ್ ಐ ರಾಮ, ಎಸ್ ​​ಪಿ ಕಮಾಂಡೆಂಟ್ ಸಿಬ್ಬಂದಿ ನಾಗರಾಜ್ ಅಂಜಪ್ಪ, ಹೆಡ್​ ಕಾನ್ಸ್​ ಟೇಬಲ್ ಸಿ.ವಿ.ಗೋವಿಂದರಾಜು, ಹೆಡ್​ ಕಾನ್ಸ್​ ಟೇಬಲ್ ಮಣಿಕಂಠ ಮಂದರ್ ಬೈಲ್, ಎಎಸ್ ​ಐ​ ಸಮಂತ್.ಎಸ್, ಹೆಡ್​ ಕಾನ್ಸ್​ ಟೇಬಲ್ ನರಸಿಂಹರಾಜು ಎಸ್.ಎನ್, ಎಸ್​ ಐ ಪುಂಡಲಿಕ್ ಜೆ.ವಿ.ರಾಮರಾವ್ ನಾಯಕ್ ​ಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.