ಮನೆ ರಾಜ್ಯ ವಿಜಯಪುರದಲ್ಲಿ 2.9 ತೀವ್ರತೆಯ ಭೂಕಂಪ

ವಿಜಯಪುರದಲ್ಲಿ 2.9 ತೀವ್ರತೆಯ ಭೂಕಂಪ

0

ವಿಜಯಪುರ : ವಿಜಯಪುರ ನಗರ ಮತ್ತು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಿನ್ನೆ (ಜ.28) ತಡರಾತ್ರಿ 12.22 ನಿಮಿಷಕ್ಕೆ ಹಾಗೂ ರಾತ್ರಿ‌ 1.20 ನಿಮಿಷಕ್ಕೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ.

ಭೂಕಂಪದ ತೀವ್ರತೆಯನ್ನು ರಿಕ್ಟರ್​ ಮಾಪಕದಲ್ಲಿ 2.9 ಎಂದು ಅಳೆಯಲಾಗಿದೆ. ಭೂಮಿಯ 5 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ.

ಭೂಕಂಪನದಿಂದ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಮನೆಯಲ್ಲಿನ ಸಾಮಾಗ್ರಿಗಳು ಚಲ್ಲಾಪಿಲ್ಲಿಯಾಗಿವೆ. ಪದೇ ಪದೆ ಭೂಕಂಪನದಿಂದ ಜನತೆ ಆತಂಕಗೊಂಡಿದ್ದಾರೆ.