ಬೆಂಗಳೂರು: ಸಚಿವರಾದ ಎನ್ ಎಸ್ ಭೋಸರಾಜು ಅವರ ಮನವಿಯಂತೆ 2024-25 ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರವನ್ನು ಬರೆದಿದ್ದಾರೆ.
ಜನವರಿ 25 ರಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು, ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿಯನ್ನು ಮಾಡಿಕೊಂಡಿದ್ದರು. ರಾಯಚೂರು ನಗರದಲ್ಲಿ ALL INDIA INSTITUTE OF MEDICAL SCIENCE (AIIMS) ಸ್ಥಾಪನೆ ಮಾಡಲು ಜಿಲ್ಲೆಯ ಜನರ ಮನವಿಯ ಮೇರೆಗೆ ಈಗಾಗಲೇ ನಮ್ಮ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ.
ರಾಯಚೂರು ನಗರದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಹಾಗೂ ಹೋರಾಟ ಸಮಿತಿಯಿಂದ ಕಳೆದ 625 ದಿನಗಳಿಂದ ಸರದಿ ಸತ್ಯಾಗ್ರಾಹ ಮುಂದುವರೆದಿದೆ. ರಾಯಚೂರು ಜಿಲ್ಲೆಯನ್ನು ಕೇಂದ್ರ ಸರಕಾರವು ಮಹತ್ವಾಕಾಂಕ್ಷೆ ಜಿಲ್ಲೆಯೆಂದು (Aspiration District) ಘೋಷಣೆ ಮಾಡಿದೆ. ಹಾಗೂ ಸಂವಿಧಾನದ 371 (ಜೆ) ವಿಧಿಯ ಅನ್ವಯ ವಿಶೇಷ ಸ್ಥಾನಮಾನ ನೀಡಲಾಗಿದೆ.
ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಏಮ್ಸ್ (AIIMS) ಸ್ಥಾಪಿಸುವ ಮೂಲಕ ಆರೋಗ್ಯ, ಉದ್ಯೋಗ, ವೈದ್ಯಕೀಯ ಶಿಕ್ಷಣದ ಬಲವರ್ಧನೆಗಾಗಿ ಹಾಗೂ ಹಿಂದುಳಿದ ಹಣೆಪಟ್ಟಿ ಕಳಚುವ ಹಿನ್ನಲೆಯಲ್ಲಿ ಏಮ್ಸ್ ಮಂಜೂರು ಮಾಡಬೇಕಾಗಿದೆ. ಈಗಾಗಲೇ ತಾವು ದಿನಾಂಕ: 17-06-2023 ಮತ್ತು 07-09-2023 ರಂದು ಕೇಂದ್ರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ರಾಯಚೂರು ನಗರದಲ್ಲಿ ಏಮ್ಸ್ (AIIMS) ಸ್ಥಾಪನೆ ಮಾಡಲು ಪತ್ರವನ್ನು ಬರೆದಿದ್ದೀರಿ. ಕೇಂದ್ರ ಸರಕಾರದ 2024-25 ನೇ ಸಾಲಿನ ಆಯ-ವ್ಯಯಕ್ಕೂ ಮುನ್ನ ಕೇಂದ್ರ ಸರಕಾರದ ವಿತ್ತ ಸಚಿವರಿಗೆ ಈ ಬಗ್ಗೆ ಇನ್ನೊಮ್ಮೆ ಗಮನಸೆಳೆಯುವಂತೆ ಸಚಿವರು ತಮ್ಮ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದರು.
ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಜನವರಿ 29, 2024 ರಂದು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರವನ್ನು ಬರೆದು ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಕೋರಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.