ಮನೆ ಅಪರಾಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶಕ್ಕೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶಕ್ಕೆ

0

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು ಪ್ಲಾಸ್ಕ್​ ನಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಸೌದಿ ಅರೇಬಿಯಾದ ಜೇದಾ ಏರ್ಪೋಟ್​ನಿಂದ ಆಗಿಸಿದ್ದ ಪ್ರಯಾಣಿಕ, ಚಿನ್ನವನ್ನು ಪೇಸ್ಟ್ ಮಾಡಿ ಪ್ಲಾಸ್ಕ್​ನ ಒಳಗಡೆ ಇಟ್ಟುಕೊಂಡು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದಾನೆ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಚಿನ್ನವಿರುವುದು ಪತ್ತೆಯಾಗಿದೆ.

ಪ್ರಯಾಣಿಕನಿಂದ ಅಧಿಕಾರಿಗಳು 7 ಲಕ್ಷ 52 ಸಾವಿರ ರೂ. ಮೌಲ್ಯದ 122 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ. ಬಳಿಕ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.