ಮನೆ ರಾಷ್ಟ್ರೀಯ ದೇಶದಲ್ಲಿ 3,451 ಮಂದಿಗೆ ಕೋವಿಡ್‌ ಪಾಸಿಟಿವ್‌

ದೇಶದಲ್ಲಿ 3,451 ಮಂದಿಗೆ ಕೋವಿಡ್‌ ಪಾಸಿಟಿವ್‌

0

ನವದೆಹಲಿ (New Delhi)-ದೇಶದಲ್ಲಿ ಕೋವಿಡ್‌ (Covid) ಸೋಂಕು ಮತ್ತೆ ಏರಿಕೆಯಾಗುತ್ತಿದ್ದು, 24 ಗಂಟೆಗಳ ಅವಧಿಯಲ್ಲಿ 3,451 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ  4,31,02,194ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ  5,24,064ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,079 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,57,495ಕ್ಕೆ ತಲುಪಿದೆ. ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20,635 ಇದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,90,20,07,487 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.