ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ (ಫೆ.01) ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದು, 2024-25ನೇ ಸಾಲಿನಲ್ಲಿಯೂ ಆದಾಯ ತೆರಿಗೆ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಕಾಪಾಡಿಕೊಳ್ಳಲಾಗಿದೆ.
ಕಳೆದ ವರ್ಷದಂತೆ ಈ ಬಾರಿಯೂ 7 ಲಕ್ಷ ಆದಾಯದವರೆಗೆ ತೆರಿಗೆ ಕಟ್ಟುವಂತಿಲ್ಲ. ನೇರ, ಪರೋಕ್ಷ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಕಳೆದ ಹತ್ತು ವರ್ಷಗಳಲ್ಲಿ ನೇರ ತೆರಿಗೆಯಲ್ಲಿ ಶೇ.3ರಷ್ಟು ಹೆಚ್ಚಳವಾಗಿದೆ. ತೆರಿಗೆ ಸಂಗ್ರಹ ದುಪ್ಪಟ್ಟಾಗಿದ್ದು, ಹಾಲಿ ಇರುವ ತೆರಿಗೆ ಪದ್ಧತಿಯನ್ನು ಮುಂದುವರಿಸುವ ಮೂಲಕ ಈ ಬಾರಿಯೂ ಆದಾಯ ತೆರಿಗೆದಾರರಿಗೆ ನಿರಾಸೆ ಮೂಡಿಸಿದಂತಾಗಿದೆ.