ಮನೆ ರಾಷ್ಟ್ರೀಯ ‘ಲಕ್ಷಾಧೀಪತಿ ದೀದಿ ಯೋಜನೆ’ ಘೋಷಣೆ: 1ಕೋಟಿ ಮನೆಗಳಿಗೆ ಉಚಿತ ವಿದ್ಯುತ್

‘ಲಕ್ಷಾಧೀಪತಿ ದೀದಿ ಯೋಜನೆ’ ಘೋಷಣೆ: 1ಕೋಟಿ ಮನೆಗಳಿಗೆ ಉಚಿತ ವಿದ್ಯುತ್

0

ನವದೆಹಲಿ:  ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತರಾಮನ್‌ ಅವರು ಮಧ್ಯಂತರ ಬಜೆಟ್ ಮಂಡಿಸಿದ್ದು, ‘ಲಕ್ಷಾಧೀಪತಿ ದೀದಿ ಯೋಜನೆ’ ಘೋಷಣೆ ಮಾಡಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್, ಲಕ್ಷಾಧೀಪತಿ ದೀದಿ ಯೋಜನೆಯಡಿ 1 ಕೋಟಿ ಮಹಿಳೆಯರು ಲಕ್ಷಾಧಿಪತಿ ದೀದಿ ಆಗಲಿದ್ದಾರೆ. ನಾವು 3 ಕೋಟಿ ಮನೆಗಳ ಗುರಿಯನ್ನು ಸಾಧಿಸುವ ಹತ್ತಿರದಲ್ಲಿದ್ದೇವೆ. ಕುಟುಂಬಗಳ ಸಂಖ್ಯೆಯ ಹೆಚ್ಚಳದಿಂದ ಉಂಟಾಗುವ ಅಗತ್ಯವನ್ನು ಪೂರೈಸಲು ಮುಂದಿನ 5 ವರ್ಷಗಳಲ್ಲಿ ಇನ್ನೂ 2 ಕೋಟಿ ಮನೆಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ. ಕ್ರೀಡೆಯಲ್ಲಿ ಹೊಸ ಎತ್ತರಕ್ಕೆ ಏರುತ್ತಿರುವ ನಮ್ಮ ಯುವಕರ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ. 2023 ರಲ್ಲಿ ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಅತ್ಯಧಿಕ ಪದಕಗಳ ಸಂಖ್ಯೆಯು ಹೆಚ್ಚಿನ ಆತ್ಮವಿಶ್ವಾಸವನ್ನು ತೋರಿಸುತ್ತದೆ ಎಂದು ತಿಳಿಸಿದರು.