ಮನೆ ರಾಜ್ಯ ಟಿಪ್ಪರ್ ಗೆ ಟೆಂಪೋ ಡಿಕ್ಕಿ: ಚಾಲಕ, ಕ್ಲೀನರ್’ಗೆ ಗಂಭೀರ ಗಾಯ

ಟಿಪ್ಪರ್ ಗೆ ಟೆಂಪೋ ಡಿಕ್ಕಿ: ಚಾಲಕ, ಕ್ಲೀನರ್’ಗೆ ಗಂಭೀರ ಗಾಯ

0

ಮಂಡ್ಯ: ಟಿಪ್ಪರ್ ಗೆ ಹಿಂಬದಿಯಿಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೋಡಿಶೆಟ್ಟಿಪುರ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಕುಡಿದು ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ಜನರೇಟರ್ ಟೆಂಪೋ, ಕೋಡಿಶೆಟ್ಟಿಪುರ ಗ್ರಾಮದ ಬಳಿ ಟಿಪ್ಪರ್‌ ಗೆ ಡಿಕ್ಕಿ ಹೊಡೆದಿದ್ದಾನೆ.

ಘಟನೆಯಲ್ಲಿ ನಶೆಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿದೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್‌ ಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.