ಚಿತ್ರದುರ್ಗ: ಜಾತಿ ಕಾರಣಕ್ಕೆ ಬಾಗೂರು ಗ್ರಾಮದ ಚನ್ನಕೇಶವ ದೇಗುಲದಲ್ಲಿ ನಮಗೂ ಗರ್ಭಗುಡಿ ಪ್ರವೇಶಕ್ಕೆ ಬಿಡಲಿಲ್ಲ. ನಾವು ದೇಗುಲಕ್ಕೆ ಹೋಗಿದ್ದೆವೆಂಬ ಕಾರಣಕ್ಕೆ ದೇವಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ಸಾಣೇಹಳ್ಳಿಯಲ್ಲಿ ಕನಕ ಪೀಠದ ಈಶ್ವರಾನಂದಪುರಿ ಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಅಂತರ್ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶುಕ್ರವಾರ ನಡೆದ ಪರಿವರ್ತನೆಯ ಹಾದಿಯಲ್ಲಿ ಮಠಗಳು ಗೋಷ್ಠಿಯಲ್ಲಿ ಈಶ್ವರಾನಂದಪುರಿ ಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ.
ಕುರುಬರ ಸ್ವಾಮೀಜಿ ಒಳಗೆ ಬಂದರೆಂಬ ಕಾರಣಕ್ಕೆ ಸ್ವಚ್ಛತೆ ಮಾಡಿದ್ದಾರೆ. ನಾವು ಹೋಗಿದ್ದಕ್ಕಾಗಿ ದೇಗುಲ ಸ್ವಚ್ಛವಾಯಿತೆಂದು ವ್ಯಂಗ್ಯವಾಡಿದ್ದಾರೆ. ಇನ್ನು ಮುಂದೆ ಚನ್ನಕೇಶವ ದೇಗುಲಕ್ಕೆ ನಾವು ಹೋಗಲ್ಲ. ಮುಜರಾಯಿ ದೇಗುಲ ಎಂದು ಗೊತ್ತಿದ್ದರೆ ಪ್ರತಿಭಟನೆ ಮಾಡುತ್ತಿದ್ದೆವು. ಉಡುಪಿಯಲ್ಲಿ ಕನಕದಾಸರು ಪ್ರತಿಭಟಿಸಿದಂತೆ ಪ್ರತಿಭಟಿಸುತ್ತಿದ್ದೆವು. ಆಗ ನಮಗೆ ಮುಜರಾಯಿ ದೇಗುಲ ಎಂಬುದು ತಿಳಿದಿರಲಿಲ್ಲ. ವೈಕುಂಠ ಏಕಾದಶಿಗೆ ಹೋದಾಗ ನರಕ ತೋರಿಸಿಬಿಟ್ಟರು. ಪೂಜಾರಿ ಹೆಣ್ಣು ಮಕ್ಕಳಿಗೆಲ್ಲಾ ಗರ್ಭಗುಡಿಗೆ ಬಿಟ್ಟರು. ಮಠಾಧೀಶರಾದ ನಮಗೇ ಗರ್ಭಗುಡಿಯ ಒಳಗೆ ಬಿಡಲಿಲ್ಲ ಎಂದು ಕನಕ ಪೀಠದ ಈಶ್ವರಾನಂದಪುರಿ ಶ್ರೀ ಕಹಿ ಘಟನೆಯನ್ನು ನೆನಪಿಸಿಕೊಂಡರು.
ಗೋಷ್ಠಿಯಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಡಾ.ಪಂಡಿತಾರಾಧ್ಯಶ್ರೀ, ಶಿವಶರಣ ಮಾದಾರ ಚನ್ನಯ್ಯ ಮಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ, ಕುಂಚಿಟಿಗ ಮಠದ ಶಾಂತವೀರಶ್ರೀ, ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಶ್ರೀ ಉಪಸ್ಥಿತರಿದ್ದರು.
ಜಾತಿ ಕಾರಣಕ್ಕೆ ತಾರತಮ್ಯ ನಡೆದಿಲ್ಲ
ಇನ್ನು ಈಶ್ವರಾನಂದಪುರಿ ಶ್ರೀಗಳ ಹೇಳಿಕೆಗೆ ಬಾಗೂರು ಚನ್ನಕೇಶವ ದೇಗುಲದ ಅರ್ಚಕ ಶ್ರೀನಿವಾಸ್ ಅವರು ಪ್ರತಿಕ್ರಿಯೆ ನೀಡಿದ್ದು, ಶ್ರೀಗಳು ಹೇಳಿದಂತೆ ಜಾತಿ ಕಾರಣಕ್ಕೆ ತಾರತಮ್ಯ ನಡೆದಿಲ್ಲ. ಈಶ್ವರಾನಂದಪುರಿಶ್ರೀ ತೆರಳಿದ ಬಳಿಕ ದೇಗುಲ ಸ್ವಚ್ಛಗೊಳಿಸಿಲ್ಲ. ಈಶ್ವರಾನಂದಪುರಿಶ್ರೀ ಹಲವು ವರ್ಷಗಳಿಂದ ಬರುತ್ತಿದ್ದಾರೆ. ಕಳೆದ ತಿಂಗಳು ನಡೆದ ವೈಕುಂಠ ಏಕಾದಶಿಗೂ ಶ್ರೀಗಳು ಬಂದಿದ್ದರು. ಸ್ವಾಮೀಜಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.