ಮನೆ ಸ್ಥಳೀಯ ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯವನ್ನು ಸೃಷ್ಟಿಸಿಕೊಳ್ಳಿ: ಶಾಸಕ ಕೆ ಗೋಪಾಲಯ್ಯ

ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯವನ್ನು ಸೃಷ್ಟಿಸಿಕೊಳ್ಳಿ: ಶಾಸಕ ಕೆ ಗೋಪಾಲಯ್ಯ

0

ಬೆಂಗಳೂರು: ಪ್ರಸ್ತುತ ಕಾಲಘಟ್ಟದಲ್ಲಿ ವಿಜ್ಞಾನ ತಂತ್ರಜ್ಞಾನ ಮಹತ್ತರವಾಗಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಎಲ್ಲ ರೀತಿಯ ಅನುಕೂಲಗಳಿವೆ ಹಾಗಾಗಿ ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯವನ್ನು ಸೃಷ್ಟಿಸಿಕೊಳ್ಳಿ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಕೆ.ಗೋಪಾಲಯ್ಯನವರು ತಿಳಿಸಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಕ್ತಿ ಗಣಪತಿ ನಗರದ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಎಂಬುದು ಎಲ್ಲರ ಹಕ್ಕು ಅದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಚೆನ್ನಾಗಿ ಶಿಕ್ಷಣವನ್ನು ಪಡೆದು ಹೆಚ್ಚು ಹೆಚ್ಚು ಜ್ಞಾನವನ್ನು ತಿಳಿದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಒಂದು ಉತ್ತಮ ಸಮಾಜವಾಗಬೇಕಾದರೆ ಅದರಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದದ್ದು. ನಿಮ್ಮ ಪೋಷಕರು ನಿಮ್ಮೆಲ್ಲರಿಗೂ ಶಿಕ್ಷಣವನ್ನು ಕೊಡಿಸಲು ಬಹಳ ಶ್ರಮ ವಹಿಸುತ್ತಾರೆ. ಅವರ ಶ್ರಮಕ್ಕೆ ಉತ್ತಮ ಫಲಿತಾಂಶವನ್ನು ನೀಡಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭವಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಹಾಯಕ ನಿರ್ದೇಶಕರಾದ ಮರಿಸ್ವಾಮಿ, ಕುಮಾರ್, ಬಾಳಪ್ಪ, ಭುವನೇಶ್ವರಿ, ಮುಖಂಡರಾದ ಬಿ.ಡಿ ಶ್ರೀನಿವಾಸ್, ಸದಾನಂದ, ವೆಂಕಟೇಶ್, ವೆಂಕಟೇಶ್ ಮೂರ್ತಿ, ಸಿಮೆಂಟ್ ಶ್ರೀನಿವಾಸ್, ತ್ಯಾಗರಾಜ್, ಸಿದ್ದಲಿಂಗ ಹಾಗೂ ಪೋಷಕರು ಶಾಲೆಯ ಪ್ರಾಧ್ಯಾಪಕರು, ಆಡಳಿತ ವರ್ಗ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.