ಬೆಂಗಳೂರು: ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ವೇಳೆ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿಸಲ್ಲಿದ್ದು ಅರ್ಜಿ ವಜಾಗೊಳಿಸಿದ ನ್ಯಾ. ಎಸ್ ದೀಕ್ಷಿತ್ ಅವರ ಪೀಠ ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ ವಿಧಿಸಿದೆ.
ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಕೇಸ್ ಹಾಕಲಾಗುತ್ತದೆ ಎಂದಿರುವ ಕೋರ್ಟ್ ಸಿಎಂ ಸಿದ್ದರಾಮಯ್ಯನವರಿಗೆ ಮಾರ್ಚ್ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟೀಸ್ ನೀಡಿದೆ ಎನ್ನಲಾಗಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.