ಮನೆ ರಾಷ್ಟ್ರೀಯ ಭದ್ರತಾ ಪಡೆಯಿಂದ ಎನ್‌ ಕೌಂಟರ್‌ ಇಬ್ಬರು ಉಗ್ರರ ಹತ್ಯೆ

ಭದ್ರತಾ ಪಡೆಯಿಂದ ಎನ್‌ ಕೌಂಟರ್‌ ಇಬ್ಬರು ಉಗ್ರರ ಹತ್ಯೆ

0

ಶ್ರೀನಗರ (Srinagar )-ಭದ್ರತಾ ಪಡೆಗಳು ನಡೆಸಿದ ಎನ್‌ ಕೌಂಟರ್‌ ನಲ್ಲಿ ಲಷ್ಕರ್ -ಎ- ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್‌ ಕೌಂಟರ್‌ ನಡೆದಿದೆ. ಹತ್ಯೆಗೀಡಾದ ಉಗ್ರರಿಂದ ಶಸಾಸ್ತ್ರಗಳು, ಮದ್ದು ಗುಂಡುಗಳು ಮತ್ತು ಕೆಲವು ಅನುಮಾನಾಸ್ಪದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚೆಯನ್ ದೇವ್ಸರ್ ನಲ್ಲಿ ಉಗ್ರರು ಅಡಗಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದರು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.