ಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ಡೆಂಘೀಗೆ ಮೊದಲ ಬಲಿಯಾಗಿದೆ.
ಕಾಲೇಜು ವಿದ್ಯಾರ್ಥಿನಿ ಸುಹನಾ ಬಾನು(18) ಮೃತಪಟ್ಟವರು.
ಚಿಕ್ಕಮಗಳೂರು ನಗರದ ಮೊಹ್ಮದ್ ಖಾನ್ ಗಲ್ಲಿ ನಿವಾಸಿಯಾಗಿರುವ ಸುಹನಾ ಬಾನುಳನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಡೆಂಗ್ಯೂ ಜ್ವರವು ಈಡಿಸ್ ಎಂಬ ಸೊಳ್ಳೆ ಕಡಿತದಿಂದ ಹರಡುವಂತಹ ಗಂಭೀರ ಕಾಯಿಲೆಯಾಗಿದೆ. ಈಡಿಸ್ ಸೊಳ್ಳೆ ಡೆಂಗ್ಯೂ ವೈರಸ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾಯಿಸುತ್ತದೆ.
ಡೆಂಗ್ಯೂ ರೋಗದ ಲಕ್ಷಣಗಳು
ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು, ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಡೆಂಗ್ಯೂ ರೋಗದ ಲಕ್ಷಣಗಳು. ಇನ್ನು ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.