ಮಂಡ್ಯ:ಲೋಕಸಭಾ ಚುನಾವಣಾ ಕಣ ರಂಗೇರಿದ್ದು,ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಅಷ್ಟೇ ಅಲ್ಲದೇ ಮುಂದಿನ ಅವಧಿಯಲ್ಲಿಯೂ ಸಹ,ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮಧ್ಯೆ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಇನ್ನೂ ಫೈನಲ್ ಆಗಿಲ್ಲ. ಮೋದಿ ಭೇಟಿಗೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದರು.
ಸುಮಲತಾ ಪೋಸ್ಟ್ ನಲ್ಲಿ ಏನಿದೆ?
ಈ ಕುರಿತು ಪೋಸ್ಟ್ ಮಾಡಿರುವ ಅವರು, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು.
ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸನ್ಮಾನ್ಯ ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ.
ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ.
ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.