ಮೈಸೂರು: ಕೇಂದ್ರ ಗೃಹ ಸಚಿವರು ಹಾಗೂ ಸಹಕಾರಿ ಸಚಿವರಾದ ಅಮಿತ್ ಶಾ ಅವರು ಫೆಬ್ರವರಿ 10 ಹಾಗೂ 11ರಂದು ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ 10 ರ ರಾತ್ರಿ 10.50 ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಫೆಬ್ರವರಿ 11ರ ಬೆಳಗ್ಗೆ 11 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳುವ ಅವರು ನಂತರ ಮಧ್ಯಾಹ್ನ 12 ಗಂಟೆಗೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 2,35 ಕ್ಕೆ ಮೈಸೂರು ನಗರದ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ಸಭೆಯಲ್ಲಿ ಭಾಗವಹಿಸಿ ಸಂಜೆ 4.55 ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.