ಮನೆ ಅಪರಾಧ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ: ಪ್ರಾಣಾಪಾಯದಿಂದ ಚಾಲಕ ಪಾರು

ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ: ಪ್ರಾಣಾಪಾಯದಿಂದ ಚಾಲಕ ಪಾರು

0

ಜಯಪುರ: ನಗರದಲ್ಲಿ ಸೋಮವಾರ ನಸುಕಿನ ಜಾವಾ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ನಡೆದಿದೆ.

ನಗರದ ಬಸವೇಶ್ವರ ವೃತ್ತದಲ್ಲಿ ನಸುಕಿನಲ್ಲಿ ಟ್ಯಾಂಕರ್ ಪಲ್ಟಿಯಾಗಿದ್ದು, ಜನ-ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಟ್ಯಾಂಕರ್ ನ್ನು ಪೊಲೀಸರು ಕ್ರೇನ್ ಸಹಾಯದಿಂದ ತೆರವುಗೊಳಿಸಿದ್ದಾರೆ.

ವಿಜಯಪುರ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.